ದಕ್ಷಿಣಕನ್ನಡ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೆ ಮೂವರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್ನ ಸರ್ಕಲ್ ನಲ್ಲಿ ಈ ಒಂದು ಅಪಘಾತ ಸಂಭವಿಸಿದೆ.
ಮೃತರು ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ. ಬಿಸಿ ರೋಡ್ನ ಎನ್. ಜಿ. ರೋಡ್ ನಲ್ಲಿರುವ ಫುಟ್ ಪಾತ್ ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಸಾವನಪ್ಪಿದ್ದು ಆರು ಜನರಿಗೆ ಗಂಭೀರವಾದ ಗಾಯಗಳಾಗಿವೆ.ಸದ್ಯಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ








