ಧಾರವಾಡ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಕ್ರೂಜರ್ ವಾಹನ ಮರಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ತೇಗುರು ಗ್ರಾಮದ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.
ಮೃತರನ್ನು ಸುರೇಶ ತುಪ್ಪದ (55) ಮತ್ತು ಮಹಾಂತಮ್ಮ (82) ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 10 ಜನರಿಗೆ ಗಂಭೀರವಾದ ಗಾಯಗಳಾಗಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತೂರು ಮತ್ತು ಗಾಯಾಳುಗಳು ಗದಗದ ನಿವಾಸಿಗಳು ಎಂದು ತಿಳಿದುಬಂದಿದೆ.
ಮಹಾರಾಷ್ಟ್ರದ ಕೊಲ್ಲಾಪುರದಿಂದ ಗದಗ ಕಡೆಗೆ ಕ್ರೂಜರ್ ವಾಹನ ತೆರಳುತ್ತಿತ್ತು.ಚಾಲಕನ ನಿರ್ಲಕ್ಷದಿಂದ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ. ನಿದ್ದೆ ಮಂಪರಿನಲ್ಲಿ ಚಾಲಕ ಮರಕೆ ಡಿಕ್ಕಿ ಹೊಡೆದು ಈ ಒಂದು ದುರಂತ ಸಂಭವಿಸಿದೆ. ಅಪಘಾತದ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.