ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ಗೇಟ್ ಬಳಿ ಕೆಎಸ್ ಆರ್ ಟಿಸಿ ಬಸ್ ಹರಿದ ಪರಿಣಾಮ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೈಕ್ ಸವಾರ ವೆಂಕಟೇಶ್ (29) ಹಾಗೂ ಮೋಕ್ಷಿತಾ (8) ಸ್ಥಳದಲ್ಲೇ ಸಾವನ್ನಪ್ಪಿದ್ದು, ಲಾವಣ್ಣ ಹಾಗೂ ನರಸಮ್ಮ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ.