ಬೆಂಗಳೂರು : ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ದುರಂತ ಸಂಭವಿಸಿದ್ದು, ಟ್ರ್ಯಾಕ್ ಗೆ ಹಾಕುವ ಬೃಹತ್ ತಡೆಗೋಡೆ ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಯಲಹಂಕ ಬಳಿಯ ಕೋಗಿಲು ಕ್ರಾಸ್ ಬಳಿ ಘಟನೆ ನಡೆದಿದೆ. ವಯಾಡೆಕ್ಟ್ ಆಟೋ ಮೇಲೆ ಬಿದ್ದು ಚಾಲಕ ಖಾಸಿಂ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿಯಲ್ಲಿ ವಯಾಡೆಕ್ಟ್ ಸಾಗಿಸುವಾಗ ಉರುಳಿ ಬಿದ್ದು ದುರಂತ ಸಂಭವಿಸಿದೆ.
18 ಚಕ್ರದ ದೊಡ್ಡ ಲಾರಿಯಲ್ಲಿ ವಯಾಡೆಕ್ಟ್ ಸಾಗಿಸುತ್ತಿದ್ದರು. ಈ ವೇಳೆ ಲಾರಿ ತುಂಡಾಗಿ ಬೃಹತ್ ವಯಾಡೆಕ್ಟ್ ನೆಲಕ್ಕುರುಳಿದೆ. ಏಕಾಏಕಿ ಆಟೋ ಮೇಲೆ ವಯಾಡೆಕ್ಟ್ ಬಿದ್ದ ಪರಿಣಾಮ ಆಟೋ ಚಾಲಕ ಖಾಸಿಂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.