ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಘೋರವಾದ ದುರಂತ ಸಂಭವಿಸಿದ್ದು ಎರಡು ಅಂತಸ್ತಿನ ಮನೆ ಒಂದು ಏಕಾಏಕಿ ಕುಸಿದಿರುವ ಘಟನೆ ಬೆಂಗಳೂರಿನ ಜೀವನ್ ಭೀಮಾ ನಗರದ ತಿಪ್ಪಸಂದ್ರದಲ್ಲಿ ನಡೆದಿದೆ.
ಪಕ್ಕದಲ್ಲಿ ಕಟ್ಟಡದ ಪಾಯ ತೆಗೆಯುವಾಗ ಈ ಒಂದು ಘಟನೆ ಸಂಭವಿಸಿದೆ ಮನೆಯಲ್ಲಿದ್ದವರನ್ನು ತಕ್ಷಣ ಪೊಲೀಸರು ಹೊರ ಕಳುಹಿಸಿದ್ದಾರೆ. ಮನೆಯಲ್ಲಿ ಯಾರಾದರೂ ಸಿಲುಕಿದ್ದಾರಾ ಎಂದು ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ. ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಬಿಡು ಬಿಟ್ಟಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.