ಉಡುಪಿ : ಅರಬ್ಬಿ ಸಮುದ್ರದಲ್ಲಿ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಗೋಪಾಡಿ ಚರ್ಕಿಕಡು ಬಳಿ ನಡೆದಿದೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗೋಪಾಡಿ ಚರ್ಕಿಕಡು ಬಳಿ ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ 10 ಯುವಕರ ತಂಡದ 7 ಮಂದಿ ನೀರಿಗೆ ಇಳಿದಿದ್ದರು.
ಈ ವೇಳೆ ಅಲೆಗಳ ಅಬ್ಬರಕ್ಕೆ ನಾಲ್ವರು ಕೊಚ್ಚಿಹೋಗಿದ್ದಾರೆ. ಈ ಪೈಕಿ ಇಬ್ಬರು ಯುವಕರು ಸಾವನ್ನಪ್ಪಿದ್ದು, ಮತ್ತೊಬ್ಬ ಯುವಕನ ರಕ್ಷಣೆ ಮಾಡಲಾಗಿದೆ. ನಾಪತ್ತೆಯಾದ ಮತ್ತೊಬ್ಬ ಯುವಕನಿಗಾಗಿ ಶೋಧ ಕಾರ್ಯ ನಡೆಸಲಾಗಿದೆ. ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.