ಶಿವಮೊಗ್ಗ : ಇತ್ತೀಚಿಗೆ ಜೋಕಾಲಿ ಆಡುವಾಗ ಓರ್ವ ಬಾಲಕಿ ಹಾಗೂ ಬಾಲಕ ಕುಣಿಕೆ ಬಿಗಿದು ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಒಂದು ಘಟನೆಗಳು ಮಾಸುವ ಮುನ್ನವೇ ಇದೀಗ ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ಜೋಕಾಲಿಯಲ್ಲಿ ಆಡುತ್ತಿದ್ದಾಗ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಸಾವನಪ್ಪಿದ್ದಾಳೆ.
ಹೌದು ಶಿವಮೊಗ್ಗದ ವಿದ್ಯಾನಗರದ 9 ವರ್ಷದ ಬಾಲಕಿ ಪ್ರಣಮ್ಯ ಸಾವನಪ್ಪಿದ್ದಾಳೆ. ಮೂರು ದಿನಗಳ ಹಿಂದೆ ನಡೆದಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಪ್ರಣಮ್ಯ ಚಿಕ್ಕಮ್ಮನ ಮನೆಗೆ ಹೋಗಿದ್ದಳು. ಶಿವಮೊಗ್ಗ ತಾಲೂಕಿನ ಲಕ್ಕಿನ ಕೊಪ್ಪದಲ್ಲಿದ್ದ ಚಿಕ್ಕಮ್ಮನ ಮನೆಗೆ ಹೋಗಿದ್ದಾಗ ಪಂಚೆಯಲ್ಲಿ ಜೋಕಾಲಿ ಮಾಡಿಕೊಂಡು ಆಡುತ್ತಿದ್ದಾಗ ಕುಣಿಕೆ ಬಿಗಿದು ಪ್ರಣಮ್ಯ ಸಾವನಪ್ಪಿದ್ದಾಳೆ. ಘಟನೆ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








