ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ನಟ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದುಕೊಂಡು ಬೆನ್ನು ನೋವಿನ ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರ ಮಧ್ಯೆ ಕಳೆದ ಎರಡು ದಿನಗಳ ಹಿಂದೆ ಎಸಿಪಿ ಚಂದನ್ ಅವರು ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇದೀಗ ಪೊಲೀಸರು ಮತ್ತಷ್ಟು ತನಿಖೆಯನ್ನು ಚುರುಕುಗೊಳಿಸಿದ್ದು, ಕೊಲೆಗೆ ಸಂಬಂಧಿಸಿದಂತೆ ಹಣದ ವ್ಯವಹಾರ ಆಗಿದೆ ಎಂದು ವಿವಿಧ ಬ್ಯಾಂಕ್ಗಳನ್ನು ತನಿಖೆ ಮಾಡುತ್ತಿದ್ದಾರೆ.
ಹೌದು ದರ್ಶನ್ ಅವರು ಕೊಲೆ ಮುಚ್ಚಿ ಹಾಕಲು ದೊಡ್ಡ ಮೊತ್ತದ ಹಣ ನೀಡಿದ್ದಾರೆ ಎನ್ನುವ ಆರೋಪ ಇದೆ. ಒಂದಷ್ಟು ಹಣದ ವ್ಯವಹಾರ ಕ್ಯಾಶ್ ಮೂಲಕ ಆಗಿದೆ. ಒನ್ನೊಂದಷ್ಟು ಹಣದ ವ್ಯವಹಾರ ಆನ್ಲೈನ್ ಮೂಲಕ ಆಗಿರೋ ಸಾಧ್ಯತೆ ಇರುತ್ತದೆ. ಈ ಬಗ್ಗೆ ಪೊಲೀಸರಿಗೆ ಅನುಮಾನ ಬಂದಿದೆ. ಹಾಗಾಗಿ ಪೊಲೀಸರು ಆರೋಪಿಗಳಿಗೆ ಸಂಬಂಧಿಸಿದಂತೆ ಆಧಾರ್ ಕಾರ್ಡ್ ಹಾಗೂ ಖಾತೆಯ ಲಿಂಕ್ ಗಳನ್ನು ನೀಡುವಂತೆ ಬ್ಯಾಂಕ್ಗಳಿಗೆ ಮನವಿ ಮಾಡಿತ್ತು. ಅದರ ಭಾಗವಾಗಿ ಇದೀಗ ಸಂಪೂರ್ಣ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮೂಲಕ ಹಲವು ಬ್ಯಾಂಕ್ ಗಳಿಂದ ಹಣದ ವ್ಯವಹಾರ ನಡೆದಿದೆ ಎಂದು ತಿಳಿದುಬಂದಿದೆ.ಇದರ ಜೊತೆಗೆ ಆನ್ಲೈನ್ ಮೂಲಕವೂ ಹಣದ ವ್ಯವಹಾರ ನಡೆದಿರುವ ಬಗ್ಗೆ ಗುಮಾನಿ ಇದೆ. ಈ ಕಾರಣದಿಂದ ಪೊಲೀಸರು ಈ ವಿಚಾರವಾಗಿ ಗಂಭೀರವಾಗಿ ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳು ಬೆಂಗಳೂರಿನ ವಿವಿಧ ಬ್ಯಾಂಕ್ನಲ್ಲಿ ಖಾತೆ ಹೊಂದಿದ್ದು, ಅವುಗಳ ಮಾಹಿತಿ ಪಡೆಯಲಾಗಿದೆ.
ಐಡಿಎಫ್ಸಿ ಫಸ್ಟ್ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಎಚ್ಡಿಎಫ್ಸಿ ಬ್ಯಾಂಕ್, ಕೋಟಕ್ ಮಹೇಂದ್ರ ಬ್ಯಾಂಕ್, ಕೆನರಾ ಬ್ಯಾಂಕ್, ಎಸ್ಬಿಐ ಬ್ಯಾಂಕ್, ಐಸಿಐಸಿಐ ಬ್ಯಾಂಕ್ಗಳು ಸೇರಿದಂತೆ ಇತರೆ ಆರೋಪಿಗಳ ಎಲ್ಲ ಆರೋಪಿಗಳ ಖಾತೆಗಳ ಮಾಹಿತಿಯನ್ನು ಮ್ಯಾನೇಜರ್ನ ಸಂಪರ್ಕಿಸಿ ಪೊಲೀಸರು ಮಾಹಿತಿ ಸಂಗ್ರಹ ಮಾಡಿದ್ದಾರೆ.








