ಬೆಂಗಳೂರು : ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನಿನ್ನೆ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿದೆ.
ಆದರೆ ಮುಡಾ ಹಗರಣದ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಸಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ತನಿಖೆಯ ಮೇಲೆ ನನಗೆ ನಂಬಿಕೆ ಇಲ್ಲ. ಹಾಗಾಗಿ ಸಿಬಿಐ ತನಿಖೆ ಆಗಬೇಕು ಎಂದು ಸ್ನೇಹಮಯಿ ಕೃಷ್ಣ ಹೇಳಿಕೆ ನೀಡಿದರು.ಲೋಕಾಯುಕ್ತ ತನಿಖೆ ಬಗ್ಗೆ ದುರುದಾರನಿಗೆ ಅನುಮಾನ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಸ್ನೇಹಮಯಿ ಕೃಷ್ಣ ಆಗ್ರಹಿಸಿದ್ದಾರೆ.
ನಮ್ಮ ಹೋರಾಟಕ್ಕೆ ಇದು ಎರಡನೇ ಜಯ. ಹೈಕೋರ್ಟ್ ಅಲ್ಲಿ ಮೊದಲನೇ ಜಯ ಸಿಕ್ಕಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಎರಡನೇ ಜಯ ಸಿಕ್ಕಿದೆ. ಅದೇ ರೀತಿ ಮುಂದಿನ ದಿನಗಳಲ್ಲಿ ನಮಗೆ ನ್ಯಾಯ ಸಿಗುತ್ತೆ ಎಂಬ ನಂಬಿಕೆ ವಿಶ್ವಾಸವಿದೆ. ಜನಪ್ರತಿನಿಧಿಗಳ ಕೋರ್ಟ್ ಮೈಸೂರು ಲೋಕಾಯುಕ್ತ ಎಸ್ಪಿಗೆ ಆದೇಶ ನೀಡಿದೆ. ಸಿಬಿಐ ಆದೇಶಿಸಬೇಕೆಂದು ಹೈಕೋರ್ಟಿಗೆ ಅರ್ಜಿ ಸಲ್ಲಿಸಲು ತೀರ್ಮಾನಿಸಿದ್ದೇನೆ ಎಂದರು.
ಸಿದ್ದರಾಮಯ್ಯ ಅವರು ಈ ಒಂದು ಹಗರಣದಲ್ಲಿ ನೇರವಾಗಿ ಭಾಗಿಯಾಗಿಲ್ಲದಿದ್ದರು, ಪರೋಕ್ಷವಾಗಿ ಭಾಗಿಯಾಗಿದ್ದರಿಂದ ಅವರ ವಿರುದ್ಧ ದೂರು ಸಲ್ಲಿಸಿದ್ದೇನೆ. ನಾನು ರಾಜೀನಾಮೆ ನೀಡಬೇಕೆಂದು ಅವರಿಗೆ ಒತ್ತಾಯ ಮಾಡಲ್ಲ. ಅವರೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.