ಬೆಂಗಳೂರು : ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ FIR ದಾಖಲಾಗಿರುವ ವಿಚಾರವಾಗಿ ಇದೀಗ ಸ್ನೇಹಮಯಿ ಕೃಷ್ಣ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿಗೂ ದೂರು ಸಲ್ಲಿಸಿದ್ದಾರೆ.
ಹೌದು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಇದೀಗ ಜಾರಿ ನಿರ್ದೇಶನಲಯಕ್ಕೂ ದೂರು ನೀಡಿದ್ದಾರೆ. ಇ-ಮೇಲ್ ಹಾಗೂ ಪತ್ರ ಬರೆದು ದೂರು ನೀಡಿದ್ದಾರೆ. ಜಾರಿ ನಿರ್ದೇಶನಲಯದ ಬೆಂಗಳೂರು ನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಈಗಾಗಲೇ ಮುಖ್ಯಮಂತ್ರಿಗಳ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದ್ದು. ಇಂದು ಲೋಕಾಯುಕ್ತ ಎಸ್ ಪಿ ಉದೇಶ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನಾಲ್ಕು ತಂಡಗಳ ರಚನೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ ED ಗೂ ದೂರು ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ.