ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಪೊಲೀಸರು ನೀಡಿದ್ದ ‘ಬಿ’ ವರದಿಯನ್ನು ಪ್ರಶ್ನಿಸಿ ಈ ಹಿಂದೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಜಾರಿ ನಿರ್ದೇಶನಾಲಯ (ಇ.ಡಿ) ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.
ಹೌದು ವಿಶೇಷ ನ್ಯಾಯಾಲಯವು ಈ ಹಿಂದೆ ಲೋಕಾಯುಕ್ತದ ಕ್ಲೀನ್ ಚೀಟನ್ನು ಅಂಗೀಕರಿಸಿತ್ತು. ಇದನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಹೈಕೋರ್ಟ್ ಸಿಎಂ ಕುಟುಂಬಕ್ಕೆ ತುರ್ತು ನೋಟಿಸ್ ಜಾರಿ ಮಾಡಿದೆ. ಪ್ರಕರಣವನ್ನು ಸ್ವತಂತ್ರ ತನಿಖಾ ಸಂಸ್ಥೆಗೆ ವಹಿಸುವಂತೆ ಕೋರಲಾಗಿದ್ದು, ED ಮೇಲ್ಮನವಿ ಸಲ್ಲಿಸಿದ್ದರಿಂದ ಪ್ರಕರಣ ಹೊಸ ತಿರುವು ಪಡೆದಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರಿಗೆ ಮಾರ್ಟ್ 26ರಂದು ತುರ್ತು ನೋಟಿಸ್ ಜಾರಿ ಮಾಡಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ’ ವರದಿಯನ್ನು ಪುರಸ್ಕರಿಸಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚೀಟ್ ನೀಡಿತ್ತು.
ಆದರೆ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು.ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾಲೀಕರಿಗೆ ನೋಟಿಸ್ ನೀಡಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಸಹ ಕೋರ್ಟ್ ಮೆಟ್ಟಿಲೇರಿದ್ದು ಪ್ರಕರಣವು ಈಗ ಹೊಸ ತಿರುವು ಪಡೆದಿದೆ.








