ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯವು ನಟ ದರ್ಶನ್ ಹಾಗೂ ಪವಿತ್ರಗೌಡ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದೆ. ಬಳಿಕ ಈ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ನೀಡಲಾಗಿದೆ. ಇದರ ಬೆನ್ನಲ್ಲೇ ನಟ ದರ್ಶನ್ ಗೆ ಐಟಿ ಸಂಕಷ್ಟ ಎದುರಾಗಿದೆ.
ಹೌದು ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 84 ಲಕ್ಷ ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಇದೀಗ ಐಟಿ ಅಧಿಕಾರಿಗಳು ನಟ ದರ್ಶನ್ ಮನೆಯ ಮೇಲೆ ದಾಳಿ ಮಾಡಲು ಕೋರ್ಟಿಗೆ ಮನವಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿ ನಟ ದರ್ಶನ್ ಗೆ ಕೊಲೆ ಪ್ರಕರಣ ಸೇರಿ ಇದೀಗ ಐಟಿ ಸಂಕಷ್ಟ ಕೂಡ ಎದುರಾಗಿದೆ.
ಅಲ್ಲದೆ ಇಂದು ಬಳ್ಳಾರಿ ಜೈಲಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದರು. ಬೇಟೆ ವೇಳೆ ನಟ ದರ್ಶನ್ ಜೈಲಲ್ಲಿ ನನಗೆ ತುಂಬಾ ಸಮಸ್ಯೆಯಾಗುತ್ತಿದೆ ದಿಂಬು, ಬೆಡ್ ಹಾಗೂ ಕುರ್ಚಿಯ ವಿಚಾರವಾಗಿ ಪತ್ನಿಯ ಬಳಿ ಅವರು ಅಳಲು ತೋಡಿಕೊಂಡಿದ್ದಾರೆ. ಇದಕ್ಕೆ ಪತ್ನಿ ವಿಜಯಲಕ್ಷ್ಮಿ ಪ್ರತಿಕ್ರಿಯೆ ನೀಡಿದ್ದು, ಈ ಕುರಿತು ವಕೀಲರ ಜೊತೆಗೆ ಚರ್ಚಿಸುತ್ತೇನೆ. ಪ್ರಕರಣದಲ್ಲಿ ಈಗಾಗಲೇ ಮೂವರಿಗೆ ಜಾಮಿನು ಸಿಕ್ಕಿದೆ. ನಿಮಗೂ ಸಿಗುತ್ತದೆ ಆತಂಕ ಪಡಬೇಡಿ ಎಂದು ಧೈರ್ಯ ಹೇಳಿದ್ದಾರೆ.