ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ನಟ ದರ್ಶನ್ ಅವರು ಕರ್ನಾಟಕ ಹೈಕೋರ್ಟ್ ನಿಂದ ರೆಗ್ಯುಲರ್ ಬೇಲ್ ಪಡೆದು ಬಿಡುಗಡೆಯಾಗಿದ್ದಾರೆ. ಆದರೆ ರಾಜ್ಯ ಪೊಲೀಸರು ಜಾಮೀನು ರದ್ದು ಕೋರಿ ಇದೀಗ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಹೌದು ದರ್ಶನ್ ಜಾಮೀನು ರದ್ದು ಕೋರಿ ಪೊಲೀಸರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ 7 ಆರೋಪಿಗಳ ಜಾಮೀನು ರದ್ದು ಪಡಿಸುವಂತೆ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಬಹುಷಃ ಮುಂದಿನವಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಬೆನ್ನು ನೋವಿನ ಸಮಸ್ಯೆ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು, ಮಧ್ಯಂತರ ಜಾಮಿನಿನ ಮೇಲೆ ಹೊರಗಡೆ ಇದ್ದರೂ ಬಳಿಕ ಬೆಂಗಳೂರಿನ ಬಿ ಡಿ ಎಸ್ ಆಸ್ಪತ್ರೆಗೆ ದಾಖಲಾಗಿದ್ದರು ಇದೇ ಸಂದರ್ಭದಲ್ಲಿ ಹೈ ಕೋರ್ಟ್ ನಿಂದ ನಟ ದರ್ಶನ್ ಅವರಿಗೆ ರೆಗ್ಯುಲರ್ ನೀಡಿ ಆದೇಶಿಸಿತ್ತು. ಇದರ ಜೊತೆಗೆ ಪ್ರಕರಣದ A1 ಆರೋಪಿ ಪವಿತ್ರ ಗೌಡg ಕೂಡ ರೆಗುಲರ್ ಜಾಮೀನು ನೀಡಿತ್ತು. ಇದೀಗ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಜಾಮೀನು ರದ್ದತಿಗೆ ಪೊಲೀಸರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.