ಮೈಸೂರು : ಮುಡಾ ಹಗರಣಕ್ಕೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸೆಡ್ಡು ಹೊಡೆದು ರಾಜ್ಯದ ಗಮನ ಸೆಳೆದ ಸ್ನೇಹಮಯಿ ಕೃಷ್ಣ ಅವರು, ಇದೀಗ ಲೋಕಾಯುಕ್ತಕ್ಕೆ ಮತ್ತೊಂದು ದೂರು ದಾಖಲಿಸಿದ್ದು , ನಗರಾಭಿವೃದ್ಧಿ ಸಚಿವ ಭರತಿ ಸುರೇಶ್ ಅವರನ್ನು ಬಂಧಿಸುವಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಹೌದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರನ್ನು ಕೂಡಲೇ ಸ್ಪಂದಿಸುವಂತೆ ಸ್ನೇಹಮಯಿ ಕೃಷ್ಣ ಅವರು ಇದೀಗ ಮೈಸೂರು ಲೋಕಾಯುಕ್ತ ಎಸ್ ಪಿ ಟಿಜೆ ಉದೇಶ್ ಅವರಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣೆಯನ್ನು ಕೂಡ ಎದುರಿಸಿದ್ದಾರೆ.
ಅಲ್ಲದೆ ಇತ್ತೀಚಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೂಡ ಈ ಒಂದು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಕಳೆದ ಕೆಲವು ದಿನಗಳ ಹಿಂದೆ ಮುಡಾದ ಮಾಜಿ ಆಯುಕ್ತರು, ಸಿಎಂ ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಸೇರಿದಂತೆ ಹಲವರನ್ನು ತೀವ್ರ ವಿಚಾರಣೆಗೆ ಒಳಪಡಿಸಿತ್ತು.ಇದೀಗ ಸ್ನೇಹಮಯಿ ಕೃಷ್ಣ ಅವರು ಸಚಿವ ಭೈರತಿ ಸುರೇಶ್ ವಿರುದ್ಧ ದೂರು ನೀಡಿದ್ದು, ಪ್ರಕರಣಕ್ಕೆ ಸ್ಫೋಟಕ ತಿರುವು ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.
.