ಮೈಸೂರು : ಮುಡಾ ಹಗರಣದ ತನಿಖೆ ಚುರುಕುಗೊಂಡ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ದಾಖಲೆ ಬಿಡುಗಡೆ ಮಾಡಿದ್ದಾರೆ. ಸೈಟ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸುವ ಮುನ್ನವೇ ಪಾರ್ವತಿ ಸಿದ್ದರಾಮಯ್ಯ ಅವರು ತಹಶೀಲ್ದಾರ್ ಮೂಲಕ ಪಾವತಿಸಿದ್ದಾರೆ ಎಂದು ದಾಖಲೆ ಬಿಡುಗಡೆ ಮಾಡಿದ್ದಾರೆ.
ಅರ್ಜಿ ಕೊಡುವ ಮುನ್ನವೇ ಶುಲ್ಕ ಪಾವತಿ ಮಾಡಿಕೊಂಡಿರುವ ಆರೋಪವನ್ನು ಸ್ನೇಹಮಯಿ ಕೃಷ್ಣ ಮಾಡಿದ್ದಾರೆ. 2022ರ ಜನವರಿ 12ರಂದು ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅರ್ಜಿ ಸಲ್ಲಿಕೆಗೂ ಮುನ್ನವೇ ಅಂದರೆ 2022ರ ಜನವರಿ 11ರಂದು ಶುಲ್ಕ ಪಾವತಿ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ನೇಹಮಯಿ ಕೃಷ್ಣ ತಮ್ಮ ಫೇಸ್‌ಬುಕ್ ಅಕೌಂಟ್‌ನಲ್ಲಿ ರಶೀದಿ ಪ್ರದರ್ಶನ ಮಾಡಿದ್ದಾರೆ.
ನೋಂದಣಿಗೆ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಿಎಂ ಪತ್ನಿ ಪಾರ್ವತಿ ಪತ್ರ ಬರೆದಿದ್ದರು. 2020ರ ಜನವರಿ 12ರಂದು ಪಾರ್ವತಿಯವರು ಮುಡಾ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದರು. ಆದರೆ ನೋಂದಣಿ ಶುಲ್ಕವನ್ನು ಒಂದು ದಿನ ಮುಂಚಿತವಾಗಿ ಪಾವತಿ ಮಾಡಿದ್ದರು. ಅಂದರೆ 2020ರ ಜನವರಿ 11ರಂದು ತಹಶೀಲ್ದಾರರಿಂದ ನೋಂದಣಿ ಶುಲ್ಕ ಪಾವತಿ ಮಾಡಿದ್ದಾರೆ. ಸಿದ್ದರಾಮಯ್ಯನವರ ಪ್ರಭಾವ ಅಧಿಕಾರಿಗಳ ಮೇಲೆ ಬೀರಿದೆ ಎಂಬುದಕ್ಕೆ ಮತ್ತೆರಡು ದಾಖಲೆಗಳು ಇದು ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ.
ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಇದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಈಗಾಗಲೇ ಮುಡಾ ಹಗರಣದ ಆರೋಪಿಗಳನ್ನು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಇದೀಗ ಇಡಿ ಎಂಟ್ರಿ ಕೊಟ್ಟಿರುವುದರಿಂದ ಸಿಎಂ ಕುಟುಂಬ ಕ್ಕೆ ಆತಂಕ ಹೆಚ್ಚಿದೆ.