ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ನಟ ದರ್ಶನ್ ಹಾಗೂ 6 ಆರೋಪಿಗಳ ಬಟ್ಟೆಯ ಮೇಲೆ ರೇಣುಕಾಸ್ವಾಮಿಯಾ ರಕ್ತದ ಕಲೆ ಪತ್ತೆಯಾಗಿದೆ ಎಂದು FSL ವರದಿಯಲ್ಲಿ ಬಹಿರಂಗವಾಗಿತ್ತು. ಇದೀಗ ಪ್ರಕರಣದ A1 ಆರೋಪಿಯಾಗಿರುವ ಪವಿತ್ರ ಗೌಡ ಚಪ್ಪಲಿಯಲ್ಲಿ ಕೂಡ ರೇಣುಕಾ ಸ್ವಾಮಿಯ ರಕ್ತದ ಕಲೆ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಹೌದು ರೇಣುಕಾಸ್ವಾಮಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾಗೌಡ ಮನೆಯಲ್ಲಿ ಕೊಲೆ ದಿನ ಆಕೆ ಧರಿಸಿದ್ದ ಚಪ್ಪಲಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದರು.ಅದನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿತ್ತು. ಚಪ್ಪಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಇರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆತಂದು ಬೆಂಗಳೂರಿನ ಪಟ್ಟಣಗೆರೆ ಶೆಡ್ ನಲ್ಲಿ ನಟ ದರ್ಶನ್ ಹಾಗೂ ಸಹಚರರು ಹಲ್ಲೆ ಮಾಡಿದ್ದರು. ಈ ವೇಳೆ ರೇಣುಕಾಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿದ್ದ ಆರೋಪ ನಟಿ ಪವಿತ್ರಾ ಗೌಡ ಮೇಲಿತ್ತು. ಈಗ ಅದೇ ಚಪ್ಪಲಿ ಮೇಲೆ ಕೊಲೆಯಾದ ವ್ಯಕ್ತಿಯ ರಕ್ತದ ಕಲೆ ಇರುವುದು ತಿಳಿದುಬಂದಿದೆ.
ಪೊಲೀಸರು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುತ್ತಿದ್ದು, ನಟ ದರ್ಶನ್ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಎಲ್ಲಾ ಆರೋಪಿಗಳನ್ನು ಆನ್‌ಲೈನ್ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಲಾಗುತ್ತದೆ. ಪರಪ್ಪನ ಅಗ್ರಹಾರ ಜೈಲಿನಿಂದ 13 ಮಂದಿ ಆರೋಪಿಗಳು ಹಾಜರಾಗಲಿದ್ದು, ತುಮಕೂರು ಜೈಲಿನಿಂದ 4 ಆರೋಪಿಗಳನ್ನ ಹಾಜರು ಪಡಿಸಲು ಸಿದ್ದತೆ ನಡೆದಿದೆ.