ಕಲಬುರಗಿ : ರಾಜ್ಯದಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಮತ್ತೊಂದು ಬಲಿಯಾಗಿದ್ದು, ಮನೆಗೋಡೆ ಕುಸಿದು ಯುವತಿ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕೊಂಡಗುಳಿ ಗ್ರಾಮದಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಯುವತಿಯನ್ನು ಜಗದೇವಿ ಬಿರಾದಾರ(23) ಎಂದು ಗುರುತಿಸಲಾಗಿದೆ.
ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.