ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಿಎಂಟಿಸಿ ಬಸ್ ಡಿಕ್ಕಿ ಆಗಿ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬೆಟ್ಟದಾಸನಪುರ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.
ಬೈಕ್ ಸವಾರನ ತಲೆಯ ಮೇಲೆ ಬಸ್ ನ ಹಿಂಬದಿ ಚಕ್ರ ಹರಿದು ಕಣಿರಾಜ್ (28) ಸಾವನ್ನಪ್ಪಿದ್ದಾರೆ. ತ್ರಿಬಲ್ ರೈಡಿಂಗ್ ವೇಳೆ ಕನಿರಾಜ್ ಆಯತಪಿ ಕೆಳಗೆ ಬಿದ್ದಾಗ ಹಿಂಬದಿಯಿಂದ ಬಂದ ಬಿಎಂಟಿಸಿ ಬಸ್ಸಿನ ಹಿಂದಿನ ಚಕ್ರಕ್ಕೆ ಸಿಲುಕಿ ಕಣಿರಾಜ್ ಸ್ಥಳದಲ್ಲಿ ಸಾವನಪ್ಪಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








