ಬೀದರ್ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಶೀಘ್ರ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ, ಇದರ ಮಧ್ಯ ಇದೀಗ ಬೀದರ್ ನಲ್ಲಿ ತಾಯಿ ಮಾಡಿ ಸಾಲಕ್ಕೆ ಹೆದರಿ ಮಗ ಆತ್ಮಹತ್ಯೆ ಶರಣಾಗಿರುವ ಘಟನೆ ವರದಿಯಾಗಿದೆ.
ಹೌದು ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ರಾಮಪುರದಲ್ಲಿ ಈ ಒಂದು ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಗಣೇಶ್ (25) ಎನ್ನುವ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಚಿಟಗುಪ್ಪ SBI ಬ್ಯಾಂಕ್ ನಲ್ಲಿ 5 ಲಕ್ಷ ರೂಪಾಯಿ ಸಾಲ ಮಾಡಿದ್ದ ಗಣೇಶ್ ತಾಯಿ, ಹೇಗೆ ತೀರಿಸುವುದು ಅಂತ ನಿತ್ಯವೂ ತಾಯಿ ಕೊರಗುತ್ತಿದ್ದರು. ತಾಯಿ ನೋವನ್ನು ನೋಡಲಾಗದೆ ಗಣೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ.ಈ ಸಂಬಂಧ ಚಿಟ್ಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








