ಬೆಳಗಾವಿ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸಾಲಗಾರರ ಕಿರುಕುಳ ಹೆಚ್ಚಾಗಿದ್ದು, ಇದೀಗ ಬೆಳಗಾವಿ ಜಿಲ್ಲೆಯ ಬೈಲಹೊಂಗದಲ್ಲಿ ಸಾಲಗಾರರ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಮಾರುತಿ ನಗರದಲ್ಲಿ ರಫೀಕ್ ಬಾಬು ಸಾಬ್ ಎಂಬುವರು ಪಿಕಪ್ ವಾಹನ ಖರೀದಿಸಲು 6 ಲಕ್ಷ ರೂ. ಸಾಲ ಪಡೆದಿದ್ದರು. ಆದರೆ ಸಾಲಗಾರರ ಕಿರುಕುಳಕ್ಕೆ ನೊಂದು ಪಿಕಪ್ ವಾಹನಕ್ಕೆ ನೆಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮರಣೋತ್ತರ ಪರೀಕ್ಷೆಗೆ ಸದ್ಯ ಶವ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಬೈಲಹೊಂಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.