ಶಿವಮೊಗ್ಗ : ಒಂದು ಕಡೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಅನೇಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೆ. ಇನ್ನೊಂದು ಕಡೆ ಕೈಸಾಲ ಪಡೆದು ಬಳಿಕ ಸಾಲಗಾರರ ಕಿರುಕುಳ ತಾಳಲಾರದೆ ಹಲವರು ಆತ್ಮತೆಗೆ ಶರಣಾಗುತ್ತಿದ್ದಾರೆ. ಇದೀಗ ಶಿವಮೊಗ್ಗದಲ್ಲಿ ಸಾಲಗಾರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.
ಹೌದು ಸಾಲಗಾರರ ಕಿರುಕುಳಕ್ಕೆ ಬೆಂಕಿ ಹಚ್ಚಿಕೊಂಡು ಪ್ರಶಾಂತ (32) ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಿದರಗೋಡು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಪೆಟ್ರೋಲ್ ಸುರದುಕೊಂಡು ಬೆಂಕಿ ಹಂಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಪ್ರಶಾಂತ್ ವರ್ಷದ ಹಿಂದೆ ಪತ್ನಿಯಿಂದ ಡಿವೋಸ್ ಪಡೆದಿದ್ದರು.ಇದೀಗ ಸಾಲಗಾರರ ಕಾಟ ತಾಳಲಾರದೆ ಪ್ರಶಾಂತ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ.