ಮಂಗಳೂರು : ರಾಜ್ಯಾದ್ಯಂತ ಮಳೆಯ ಅರ್ಭಟ ಮುಂದುವರೆದಿದ್ದು, ಭಾರಿ ಮಳೆಗೆ ಕಾಂಪೌಂಡ್ ಕುಸಿದು ಬಾಲಕಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕೆರೆ ಎಂಬಲ್ಲಿ ನಡೆದಿದೆ.
ಮನೆಗೆ ಹಿಂಬದಿಯ ತಡೆಗೋಡೆ ಕುಸಿದು ಬಿದ್ದಿದ್ದು, ಬಾಲಕಿ ನಯಿಮ (10) ಮೃತಪಟ್ಟಿದ್ದಾರೆ. ಮನೆಯ ಕೊಠಡಿಯ ಕಿಟಕಿ ಮಗುವಿನ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡು ನಯಿಮ ಆಸ್ಪತ್ರೆಗೆ ದಾಖಲಾಗಿದ್ದಳು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.