ಹಾವೇರಿ : ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಬಲಿಯಾಗಿದ್ದು, ನಿರಂತರ ಮಳೆಗೆ ಮನೆ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಿರವಾಡ ಗ್ರಾಮದಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಿರವಾಡ ಗ್ರಾಮದ ನಿವಾಸಿ ಶಾಂತಮ್ಮ ತಳವಾರ (52) ಮಳೆಗೆ ಮನೆಗೋಡೆ ಕುಸಿದು ಬಿದ್ದ ಪರಿಣಾಮ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಕಂದಾಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಠನೆ ನಡೆದಿದೆ.