ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹಿಟ್‌ & ರನ್‌ ಗೆ ಮತ್ತೊಂದು ಬಲಿಯಾಗಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತ ಬೈಕ್‌ ಸವಾರನನ್ನು ನೆಲಗದರನಹಳ್ಳಿ ನಿವಾಸಿ ರಘು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share.
Exit mobile version