ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಬೆಂಗಳೂರಿನ ಗಾಂಧಿನಗರದ ಜಂಕ್ಷನ್ ಬಳಿ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ದಿನೇ ದಿನೇ ಟ್ರಾಫಿಕ್ ಜಾಮ್ ನಿಂದಾಗಿ ಬೆಂಗಳೂರಲ್ಲಿ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಗೆ ಮತ್ತೊಂದು ಬಲಿಯಾಗಿದ್ದು, ಬೈಕ್ ಸವಾರನೊಬ್ಬ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಗಾಂಧಿನಗರ ಜಂಕ್ಷನ್ ನಲ್ಲಿ ಈ ಒಂದು ಘಟನೆ ಸಂಭವಿಸಿದೆ. ಬೊಲೆರೋ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.