ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಹಿಟ್ & ರನ್ ಪ್ರಕರಣ ಬೆಳಕಿಗೆ ಬಂದಿದ್ದು, ಪಾದಚಾರಿಯ ಮೇಲ ಕ್ಯಾಂಟರ್ ಹರಿಸಿ ಚಾಲಕ ಪರಾರಿಯಾಗಿರುವ ಘಟನೆ ನೆಲಮಂಗಲದ ಬಳಿ ನಡೆದಿದೆ.
ಬೆಂಗಳೂರಿನ ನೆಲಮಂಗಲದ ಮಾದನಾಯಕಹಳ್ಳಿ ಬಳಿ ಪಾದಾಚಾರಿ ಮೇಲೆ ಕ್ಯಾಂಟರ್ ಹರಿಸಿ ಚಾಲಕ ಪರಾರಿಯಾಗಿದ್ದಾನೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಅಪಘಾತದ ಬಳಿಕ ಕ್ಯಾಂಟರ್ ನಿಲ್ಲಿಸದೇ ಚಾಲಕ ಪರಾರಿಯಾಗಿದ್ದಾನೆ.
ಘಟನೆ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.