ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಹಿಟ್ & ರನ್ ಗೆ ಮತ್ತೊಂದು ಬಲಿಯಾಗಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ಹಿಟ್ & ರನ್ ಗೆ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ್ದು, ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಲ್ಲುಚೌದ್ರಿ (28) ಎಂದು ಗುರುತಿಸಲಾಗಿದೆ.
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.