ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಪ್ರಕರಣ ನಡೆದಿದ್ದು, ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಟಕ್ಕಿ ಒಬ್ಬರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ, ಬೆಂಗಳೂರಿನ ಬಾಣಸವಾಡಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಟೆಕ್ಕಿಯನ್ನು ಆಂಧ್ರಪ್ರದೇಶದ ಕರ್ನೂಲ್ ಮೂಲದ ಸಲಗುಣ ಪ್ರದೀಪ್ (25) ಎಂದು ತಿಳಿದುಬಂದಿದೆ. ಸಾಫ್ಟ್ವೇರ್ಇಂಜಿನಿಯರ್ ಆಗಿದ್ದ ಸಲಗುಣ ಪ್ರದೀಪ್, ನಗರದ ಕಲ್ಕೆರೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಶನಿವಾರ ಸಂಜೆ ಬೈಕ್ ನಲ್ಲಿ ಕಲ್ಯಾಣನಗರದಲ್ಲಿ ತೆರಳುವಾಗ ಅಪರಿಚಿತ ವಾಹನ ಡಿಕ್ಕಿಯಾಗಿದೆ.
ಪರಿಣಾಮ ರಸ್ತೆಗೆ ಬಿದ್ದ ಸಲಗುಣ ಪ್ರದೀಪ್ ಗಾಯಗೊಂಡಿದ್ದರು, ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಬೈಕ್ಕೆ ಡಿಕ್ಕಿ ಹೊಡೆದ ಅಪರಿಚಿತ ವಾಹನದ ಚಾಲಕ ಪರಾರಿಯಾಗಿದ್ದು, ಘಟನಾ ಸ್ಥಳದ ಸಿಟಿಟಿವಿ ದೃಶ್ಯಾವಳಿ ಪರಿಶೀಲಿಸಿ ವಾಹನ ಸವಾರನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.