ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿಯಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದೊಡ್ಡಬಳ್ಳಾಪುರ ನಗರದ ರೈಲ್ವೆ ಸ್ಟೇಷನ್ ಬಳಿ ಘಟನೆ ನಡೆದಿದ್ದು, ರಸ್ತೆ ಬದಿ ನಿಂತಿದ್ದವರನಿಗೆ ಡಿಕ್ಕಿ ಹೊಡೆದು ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ.
ಡಿಕ್ಕಿ ಹೊಡೆದ ರಭಸಕ್ಕೆ ಹಿಂದೂಪರ ಮೂಲದ ಬಾಲು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದೊಡ್ಡಬಳ್ಳಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.