ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿಯಾಗಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಮೈಕೋ ಲೇಔಟ್ ಡಬಲ್ ಡೆಕ್ಕರ್ ಫ್ಲೈಓವರ್ ಮೇಲೆ ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಫ್ಲೈಓವರ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ನಿನ್ನೆ ರಾತ್ರಿ 7.40 ರ ಸುಮಾರಿಗೆ ಘಟನೆ ನಡೆದಿದೆ. ಮೈಕೋ ಲೇಔಟ್ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.