ಬೆಂಗಳೂರು : ರಸ್ತೆ ದಾಟುತ್ತಿದ್ದ ವೇಳೆ ಲಾರಿಯೊಂದು ಪಾದಚಾರಿ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.
ನೆಲಮಂಗಲದ ಬಳಿಯ ಟೋಲ್ ಬಳಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿಯಾಗಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯನ್ನು ಆಂಧ್ರಪ್ರದೇಶದ ಬಾಬು ಎಂದು ಗುರುತಿಸಲಾಗಿದೆ.
ಅಪಘಾತದ ಬಳಿಕ ಲಾರಿ ಚಾಲಕ ಲಾರಿ ನಿಲ್ಲಿಸದೇ ಪರಾರಿಯಾಗಿದ್ದು. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.