ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿಯಾಗಿದ್ದು, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕಂಠೀರವ ಸ್ಟೇಡಿಯಂ ಬಳಿ ನಡೆದಿದೆ.
ಬೈಕ್ ಚಲಾಯಿಸುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಖಾಸಗಿ ಬಸ್ ಚಾಲಕ ಬಸ್ ನಿಲ್ಲಿಸದೇ ಪರಾರಿಯಾಗಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.