ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿಯಾಗಿದ್ದು, ಕಾರು ಡಿಕ್ಕಿಯಾಗಿ ಫ್ಲೈಓವರ್ ಮೇಲಿಂದು ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಚ್ಚಳ್ಳಿ ಗೇಟ್ ಫ್ಲೈಓವರ್ ಮೇಲೆ ಘಟನೆ ನಡೆದಿದೆ. ಒನ್ ವೇನಲ್ಲಿ ಬಂದ ಕಾರು ಚಾಲಕನಿಂದ ಭೀಕರ ಅಪಘಾತವಾಗಿದ್ದು, ಫ್ಲೈಓವರ್ ಮೇಲಿಂದ ಬಿದ್ದು ನೇತ್ರಾವತಿ (31) ಮೃತಪಟ್ಟಿದ್ದಾರೆ.
ಮೃತ ನೇತ್ರಾವತಿ ಬೆಂಗಳೂರಿನ ಬಾಣಸವಾಡಿ ಮೂಲದವರಾಗಿದ್ದು, ಡಿಕ್ಕಿ ರಭಸಕ್ಕೆ ಫ್ಲೈಓವರ್ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ.ಬೈಕ್ ನ ಎಡಭಾಗಕ್ಕೆ ಬಿದ್ದ ಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತವೆಸಗಿ ಕಾರು ಚಾಲಕ ಪರಾರಿಯಾಗಿದ್ದಾನೆ.