ಬೆಳಗಾವಿ : ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ವಿಷ ಸೇವಿಸಿದ್ದ ವ್ಯಕ್ತಿಯೊಬ್ಬರು ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಫೆಬ್ರವರಿ 11 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಸವರಾಜ್ ಎಂಬುವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಬಸವರಾಜ್ 4 ಮೈಕ್ರೋ ಫೈನಾನ್ಸ್ ಕಂಪನಿಗಳಿಂದ 2.50 ಲಕ್ಷ ರೂ. ಸಾಲ ಪಡೆದುಕೊಂಡಿದ್ದರು. ವಾರದ ಕಂತು ಕಟ್ಟುವಂತೆ ಸಿಬ್ಬಂದಿಗಳು ಕಿರುಕುಳ ನೀಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಕಿರುಕುಳ ತಾಳದೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.







