ಹಾಸನ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಅಟ್ಟಹಾಸಕ್ಕೆ ಮತ್ತೊಂದು ಬಲಿಯಾಗಿದ್ದು, ಹಾಸನದಲ್ಲಿ ನೇಣು ಬಿಗಿದುಕೊಂಡು ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಅರಕಲಗೂಡ ತಾಲೂಕಿನ ಕಂಟೇನಹಳ್ಳಿಯಲ್ಲಿ ರೈತ ರವಿ (50) ಎಂಬುವರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿ ವಿವಿಧ ಸಂಘ, ಮೈಕ್ರೋ ಫೈನಾನ್ಸ್ ಗಳಿಂದ 9 ಲಕ್ಷ ಸಾಲ ಮಾಡಿದ್ದರು. ಜೊತೆಗೆ ಶುಂಠಿ ಬೆಲೆ ಕುಸಿತ ಕಂಡಿದ್ದು, ಇದರಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಕೊಣನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.