ಮೈಸೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ಮೈಸೂರಿನಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆಯ ಮಲ್ಕುಂಡಿ ಗ್ರಾಮದಲ್ಲಿ ಕೃಷ್ಣಮೂರ್ತಿ ಎಂಬಾತ ಧರ್ಮಸ್ಥಳ ಸಂಘದ ಸಾಲ ಕಟ್ಟಲಾಗದೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಧರ್ಮಸ್ಥಳ ಸಂಘದಲ್ಲಿ ಸಾಲ ತೆಗೆದುಕೊಂಡಿದ್ದ ಕೃಷ್ಣಮೂರ್ತಿ ಸಾಲ ಕಟ್ಟಲಾಗದೇ ಸಾಲ ಕೊಡುವಂತೆ ಹಲವರ ಬೇಡಿಕೊಂಡಿದ್ದ. ಸಾಲ ಸಿಗದೇ ಇದ್ದಾಗ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಹುಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.