ದಾವಣಗೆರೆ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ದಾವಣಗೆರೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದಾವಣಗೆರೆ ತಾಲೂಕಿನ ಶಿರನಗೊಂಡನಹಳ್ಳಿಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಚಿತ್ರಲಿಂಗ (31) ಎಂಬುವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಉಜ್ಜೀವನ್ ಫೈನಾನ್ಸ್ ಬಳಿ 1.23 ಲಕ್ಷ, ಐಡಿಎಫ್ ಸಿ ಬಳಿ 1 ಲಕ್ಷ ರೂ. ಎಲ್ ಎನ್ ಟಿ ಬಳಿ 75 ಸಾವಿರ ರೂ. ಸಾಲ ಪಡೆದಿದ್ದ ಚಿತ್ರಲಿಂಗ, ನನ್ನ ಕುಟುಂಬ ಚೆನ್ನಾಗಿರಲಿ ಎಂದು ಸಾಲ ಮಾಡಿದ್ದೆ. ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಡೆತ್ ನೋಟ್ ನಲ್ಲಿ ಫೈನಾನ್ಸ್ ಕಂಪನಿ ಸಿಬ್ಬಂದಿ ನಂಬರ್ ಬರೆದು ನೇಣಿಗೆ ಶರಣಾಗಿದ್ದಾರೆ. ಫೈನಾನ್ಸ್ ಕಂಪನಿಗಳ ಕಿರುಕುಳವೇ ನನ್ನ ಪತಿ ಸಾವಿಗೆ ಕಾರಣ ಎಂದು ಚಿತ್ರಲಿಂಗ ಪತ್ನಿ ಆರೋಪಿಸಿದ್ದಾರೆ. ದಾವಣಗೆರೆ ಗ್ರಾಮಾಂತರ ಠಾಣೆಗೆ ಪತ್ನಿ ಪವಿತ್ರಾ ದೂರು ನೀಡಿದ್ದಾರೆ.