ಬೆಳಗಾವಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ಕೆರೆಗೆ ಹಾರಿ ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅನಿಗೋಳ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಗೌರವ್ವ ನೀಲಪ್ಪ ಕೆಂಗಾನೂರು (36) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಗೌರವ್ವ ಮೈಕ್ರೋ ಫೈನಾನ್ಸ್ ನಲ್ಲಿ 7-10 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸುವಂತೆ ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಜೀವನ ನಿರ್ವಹಣೆಗಾಗಿ ಗೌರವ್ವ ಸಾಲಮಾಡಿಕೊಂಡಿದ್ದರು. ಘಟನಾ ಸ್ಥಳದಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಬೈಲ ಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.








