ಬೆಳಗಾವಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ಕಕ್ಕೇರಿ ಗ್ರಾಮದಲ್ಲಿ ಕ್ರಿಮಿನಾಶಕ ಸೇವಿಸಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ.
ಹೌದು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ಯುವಕ ಕ್ರಿಮಿನಾಶಕ ಸೇವಿಸಿ ಸಾವನ್ನಪ್ಪಿದ್ದಾನೆ. ಮನೆ ನಿರ್ಮಾಣಕ್ಕೆ ಎಂದು ಯುವಕ 8 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದ. ನಿನ್ನೆ ರಾತ್ರಿ ವಿಷಯ ಸೇವಿಸಿರುವ ಗೋವಿಂದ ವಡ್ಡರ್ (34) ಸಾವನ್ನಪ್ಪಿದ್ದಾನೆ. ಮೃತನ ಸಾವಿಗೆ ಪರಿಹಾರ ನೀಡುವಂತೆ ಇದೀಗ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಖಾನಾಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.