ಕಾರವಾರ: ರಾಜ್ಯದಲ್ಲಿ ಮಂಗನ ಕಾಯಿಲೆ ಆತಂಕ ಹೆಚ್ಚಾಗಿದ್ದು, ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನಕಾಯಿಲೆಗೆ 11 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.
ಮಂಗನಕಾಯಿಲೆಗೆ ತುತ್ತಾಗಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದ ಬಾಲಕ ಆರವ್ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ.
ಅವರ್ಸಾ ಗ್ರಾಮದ 11 ವರ್ಷದ ಬಾಲಕ ಆರವ್ಗೆ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆಎಫ್ಟಿ) ಇರುವುದಾಗಿ ಏಪ್ರಿಲ್ ನಲ್ಲಿ ವೈದ್ಯರು ದೃಢಪಡಿಸಿದ್ದರು. ಆರವ್ ನನ್ನು ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಗೆ ಸೇರಿಸಲು ಯೋಜಿಸಲಾಗಿತ್ತು. ಈ ನಡುವೆ, ಅರವ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.