ಕಲಬುರಗಿ : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿಯಾಗಿದ್ದು, ಮನೆಗೋಡೆ ಕುಸಿದು ಬಾಲಕಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ನಡೆದಿದೆ.
ಯಡ್ರಾಮಿ ಪಟ್ಟಣದಲ್ಲಿ ಭಾರೀ ಮಳೆಯಾಗಿದ್ದು, ಮಲಗಿದ್ದ ವೇಳೆ ಮನೆಗೋಡೆ ಕುಸಿದು ಸಾನಿಯಾ ಸೈಫನಸಾಬ್ ಸಾವನ್ನಪ್ಪಿದ್ದು, ನಾಲ್ವರು ಮಕ್ಕಳು ಗಾಯಗೊಂಡಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.