ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಿಎಂಟಿಸಿ ಬಸ್ ಹರಿದು 70 ವರ್ಷದ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಮಡಿವಾಳ ಬಸ್ ನಿಲ್ದಾಣದ ಬಳಿ ಬಿಎಂಟಿಸಿ ಬಸ್ ಹರಿದಿ 70 ವರ್ಷದ ಪಾದಚಾರಿ ಸಾವನ್ನಪ್ಪಿದ್ದಾರೆ. ಮೃತ ವೃದ್ಧ ಮಡಿವಾಳ ಮೂಲದ ನಿವಾಸಿ ಎನ್ನಲಾಗಿದೆ.
ಮಡಿವಾಳ ಬಸ್ ನಿಲ್ದಾಣದ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಿಎಂಟಿಸಿ ಬಸ್ ಪಾದಚಾರಿ ಮೇಲೆ ಹರಿದ ಪರಿಣಾಮ ವೃದ್ಧ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








