ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಬಸ್ ಹರಿದು ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಯಲಹಂಕದ ಕೋಗಿಲು ಕ್ರಾಸ್ ಮಾರುತಿ ನಗರದಲ್ಲಿ ಬಿಎಂಟಿಸಿ ಬಸ್ ಹರಿದು ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತ ಘಟನೆಯಲ್ಲಿ 11 ವರ್ಷದ ಬಾಲಕಿ ತನ್ವಿಕೃಷ್ಣ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ತನ್ವಿಕೃಷ್ಣ ಖಾಸಗಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಳು.
ಬೈಕ್ ಸ್ಕಿಡ್ ಆಗಿ ಬಾಲಕಿ ತನ್ವಿಕೃಷ್ಣ ಕೆಳಗೆ ಬಿದ್ದಿದ್ದಾಳೆ. ಕೆಳಗೆ ಬಿದ್ದ ಬಾಲಕಿ ಮೇಲೆಯೇ ಬಿಎಂಟಿಸಿ ಬಸ್ ಹರಿದಿದೆ. ಬಸ್ ಚಕ್ರಕ್ಕೆ ಸಿಲುಕಿ ಬಾಲಕಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.