ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಬಿಎಂಟಿಸಿ ಬಸ್ ಹರಿದು ಪ್ರಯಾಣೀಕ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಜಯನಗರ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಹರಿದ ಪರಿಣಾಮ ಪ್ರಯಾಣಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಬೆಳಗ್ಗೆ 9 ಗಂಟೆಗೆ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಆಯತಪ್ಪಿ ಬಿದ್ದಿದ್ದರಿಂದ ಬಸ್ ನ ಮುಂದಿನ ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಸಾವನ್ನಪ್ಪಿದ್ದಾರೆ. ಜಯನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.