ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ. ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿ ಎಂವಿಜೆ ಕಾಲೇಜು ಬಳಿ ಈ ಒಂದು ಘಟನೆ ನಡೆದಿದೆ. ನಿನ್ನೆ ರಾತ್ರಿ ರಸ್ತೆ ದಾಟುತ್ತಿದ್ದಾಗ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ವ್ಯಕ್ತಿಯ ಮೇಲೆ ಹರಿದಿತ್ತು.
ಪಾದಚಾರಿಯನ್ನು ಸ್ಥಳೀಯರು ತಕ್ಷಣ ವೈದೇಹಿ ಆಸ್ಪತ್ರೆಗೆ ದಾಖಲಿಸಿದ್ದರು. ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಪಾದಚಾರಿ ಸಾವನ್ನಪ್ಪಿದ್ದಾನೆ KA 41 D 2741 ಸಂಖ್ಯೆಯ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಪೋ ನಂಬರ್ 29ರ ಐಬಿಎಮ್ ಕಂಪನಿಯ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಇದಾಗಿದ್ದು, ಟಿನ್ ಫ್ಯಾಕ್ಟರಿಯಿಂದ ಚನ್ನಸಂದ್ರ ಕಡೆಗೆ ಸಂಚಾರ ಮಾಡುತ್ತಿತ್ತು ಸದ್ಯ ವೈಟ್ ಫೀಲ್ಡ್ ಸಂಚಾರಿ ಠಾಣೆ ಪೊಲೀಸರು ಬಸ್ ವಶಕ್ಕೆ ಪಡೆದಿದ್ದಾರೆ.