ನವದೆಹಲಿ : ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ದಾಳಿ ಕುರಿತಂತೆ ಸೇನಾಧಿಕಾರಿಗಳು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ ನಲ್ಲಿ DGMO ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾಹಿತಿ ನೀಡಿದರು.
ಅದಕ್ಕೂ ಮುನ್ನ ಭಾರತೀಯ ಸೇನೆಯು ಆಪರೇಷನ್ ಸಿಂಧೂರ ಕುರಿತಂತೆ ವಿಡಿಯೋ ಒಂದನ್ನು ರಿಲೀಸ್ ಮಾಡಿದೆ. ಈ ಕುರಿತಂತೆ ANI ಸುದ್ದಿ ಸಂಸ್ಥೆ ಈ ಒಂದು ವಿಡಿಯೋ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ಒಂದು ವಿಡಿಯೋದಲ್ಲಿ ವಾಯು ಸೇನೆಯು, ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸುವ, ಹಾಗೂ ಉಗ್ರರನ್ನು ಹತ್ಯೆಗೈಯುವ ದೃಶ್ಯಗಳನ್ನು ಒಳಗೊಂಡಿದೆ. ಅಲ್ಲದೇ ಪಾಕಿಸ್ತಾನದ ಕ್ಷಿಪಣಿಗಳನ್ನು ನಾಶ ಮಾಡುವ ವಿಡಿಯೋ ಫೋಟೋ ಒಳಗೊಂಡಿದೆ.
ಈ ಒಂದು ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಸೇನೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ಭಾರತೀಯ ವಾಯುಪಡೆಯ ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ಏರ್ ಮಾರ್ಷಲ್ ಅವಧೇಶ್ ಕುಮಾರ್ ಭಾರ್ತಿ ಹಾಗು ನೌಕಾ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ವೈಸ್ ಅಡ್ಮಿರಲ್ ಎಎನ್ ಪ್ರಮೋದ್ ಉಪಸ್ಥಿತರಿದ್ದರು.
#WATCH | Delhi: While DGMOs briefing, Indian military shows the debris of Pakistani Mirage pic.twitter.com/VQXL5bG8pZ
— ANI (@ANI) May 12, 2025