ಬೆಂಗಳೂರು : ದಾವಣಗೆರೆ ದಕ್ಷಿಣ ಉಪ ಚುನಾವಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಮುಸ್ಲಿಂ ನಾಯಕರ ನಡುವಿನ ಭಿನ್ನಮತ ಸ್ಫೋಟಗೊಂಡಿದೆ. ಶುಕ್ರವಾರವಷ್ಟೇ ಕಾಂಗ್ರೆಸ್ ಪಕ್ಷದ ಮುಸ್ಲಿಂ ಶಾಸಕರು ಪತ್ರಿಕಾಗೋಷ್ಠಿಯನ್ನು ನಡೆಸಿ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಅಬ್ದುಲ್ ಜಬ್ಬಾರ್ ಅವರ ಕುರಿತಾಗಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದರು.
ಹೌದು ದಾವಣಗೆರೆ ದಕ್ಷಿಣ ಉಪಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿದ್ದ ಅಬ್ದುಲ್ ಜಬ್ಬಾರ್ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಜಬ್ಬಾರ್ ರಾಜೀನಾಮೆ ನೀಡಿದ್ದು, ಇದೀಗ ಈ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಂಗೀಕರಿಸಿದ್ದಾರೆ. ಅಷ್ಟೆ ಅಲ್ಲದೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿ ಆದೇಶ ಹೊರಡಿಸಿದ್ದು, ಈ ಬೆಳವಣಿಗೆ ಕಾಂಗ್ರೆಸ್ನಲ್ಲಿ ಭಾರೀ ಸಂಚನಲನ ಮೂಡಿಸಿದೆ.
ಅಬ್ದುಲ್ ಜಬ್ಬಾರ್ ರಾಜಿನಾಮೆ ಬೆನ್ನಲ್ಲೆ, ಮಹಮ್ಮದ್ ಸಿರಾಜ್ ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಘಟಕ ಉಪಾಧ್ಯಕ್ಷ ಹಾಗೂ ವಕ್ಫ ಮಂಡಳಿ ಮಾಜಿ ಅಧ್ಯಕ್ಷ. ಇನ್ನೂ ಮೂರು ಜನ ಕೆಪಿಸಿಸಿ ಅಲ್ಪ ಸಂಖ್ಯಾತರ ಘಟಕ ಕಾರ್ಯದರ್ಶಿಗಳಾದ ಅಬ್ದುಲ್ ಗನಿ ತಾಹೀರ್, ನೂರ್ ಅಹ್ಮದ್, ಹುಸೇನ್ ಉಕ್ಕಡಗಾತ್ರಿ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತ ಡಿಕೆ ಶಿವಕುಮಾರ್ ಇಡೀ ಅಲ್ಪಸಂಖ್ಯಾತರ ಘಟಕವನ್ನೇ ವಿಸರ್ಜನೆ ಮಾಡಿದ್ದಾರೆ.








