ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಬ್ಬ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಮಲ್ಲೇಶ್ವರಂ ಸಮೀಪದ ಸಾಯಿ ರೆಸಿಡೆನ್ಸಿ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದುಕೊಂಡು 45 ವರ್ಷದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ಪೊಲಿಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.