ರಾಯಚೂರು : ರಾಯಚೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ಮತ್ತೋರ್ವ ಬಾಣಂತಿಯ ಸಾವಾಗಿದ್ದು, ಇದರಿಂದ ಆಕ್ರೋಶಗೊಂಡ ಬಾಣಂತಿಯ ಸಂಬಂಧಿಕರು ಆಸ್ಪತ್ರೆಯ ಬಳಿಯಿದ್ದ ಆಂಬುಲೆನ್ಸ್ ಅನ್ನು ಇದೀಗ ಧ್ವಂಸ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ದೊಡ್ಡ ಹೈಡ್ರಾಮಾವೇ ನಡೆದಿದೆ.
ಮಸ್ಕಿಯ ಖಾಸಗಿ ನರ್ಸಿಂಗ್ ಹೋಮ್ ಬಳಿ ಬಾಣಂತಿ ಸಾವಿಗೆ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಮೃತ ಬಾಣಂತಿ ಸಿದ್ದಮ್ಮ ಅವರ ಸಂಬಂಧಿಕರು ಅಂಬುಲೆನ್ಸ್ ದ್ವಂಸ ಮಾಡಿದ್ದಾರೆ. ಸ್ತ್ರೀರೋಗ ತಜ್ಞೆ ಸೌಮ್ಯ ಗುಂಡಳ್ಳಿ ವಿರುದ್ಧ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ.
ಖಾಸಗಿ ಆಸ್ಪತ್ರೆಗೆ ಮುತ್ತಿಗೆ ಹಾಕಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆ ಬಳಿ ಆಂಬುಲೆನ್ಸ್ ಗಳನ್ನು ಸಾಮಾಜಿಕರು ದ್ವಂಸ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ನಡೆದಿದ್ದು ಮಸ್ಕಿಯ ಖಾಸಗಿ ನರ್ಸಿಂಗ್ ಈ ಒಂದು ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.