ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿದ್ದು, ಇದೀಗ ಮತ್ತೊಬ್ಬ ಯುವಕ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ.
ಹಾಸನ ಹೊರವಲಯದ ಚಿಕ್ಕಕೊಂಡಗುಳ ಗ್ರಾಮದಲ್ಲಿ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪಿದ್ದಾನೆ. 21 ವರ್ಷದ ಮದನ್ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾನೆ.
ಮೃತ ಮದನ್ ಹಾಸನ ತಾಲೂಕಿನ ಚಿಟ್ನಳ್ಳಿ ಗ್ರಾಮದ ನಿವಾಸಿಯಾಗಿದ್ದಾನೆ. ತಾಯಿ ಜೊತೆ ಚನ್ನಪಟ್ಟಣದಲ್ಲಿ ಮದನ್ ವಾಸವಾಗಿದ್ದ 2 ದಿನದ ಹಿಂದೆ ಚಿಕ್ಕಕೊಂಡಗುಳದ ಭಾವನ ಮನೆಗೆ ಬಂದಿದ್ದ ಈ ವೇಳೆ ನಿನ್ನೆ ರಾತ್ರಿ ಎದೆನೋವಿನಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಈ ಮೂಲಕ ಹಾಸನ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ.